Breaking News
Home / ರಾಜ್ಯ / FLASH :’6ನೇ ತರಗತಿ’ಯ ‘ಸಮಾಜ ವಿಜ್ಞಾನ ಭಾಗ-2’ದಲ್ಲಿನ ಈ ‘ಪಠ್ಯವಿಷಯ’ಕ್ಕೆ ಕತ್ತರಿ

FLASH :’6ನೇ ತರಗತಿ’ಯ ‘ಸಮಾಜ ವಿಜ್ಞಾನ ಭಾಗ-2’ದಲ್ಲಿನ ಈ ‘ಪಠ್ಯವಿಷಯ’ಕ್ಕೆ ಕತ್ತರಿ

Spread the love

ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪುಟ ಸಂಖ್ಯೆ -82 ಹಾಗೂ 83ರಲ್ಲಿನ ವಿಷಯಾಂಶಗಳನ್ನು ಬೋಧನೆ, ಕಲಿಕೆ, ಮೌಲ್ಯಮಾಪನಕ್ಕೆ ಪರಿಗಣಿಸದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಂತೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಸುತ್ತೋಲೆ ಹೊರಡಿಸಿದ್ದು, 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7, ಹೊಸಧರ್ಮಗಳ ಉದಯ ಈ ಪಾಠದಲ್ಲಿನ ಪುಟ ಸಂಖ್ಯೆ 82 ಹಾಗೂ 83ರಲ್ಲಿನ ವಿಷಯಾಂಶಗಳನ್ನು, 2020-21ನೇ ಶೈಕ್ಷಣಿಕ ಸಾಲಿಗೆ ಬೋಧನೆ, ಕಲಿಕೆಗೆ, ಮೌಲ್ಯಮಾಪನಕ್ಕೆ ಪರಿಗಣಿಸದಿರುವಂತೆ ನಿಮ್ಮ ಹಂತದಿಂದ, ಸಂಬಂಧಿಸಿದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದ್ದಾರೆ. ಈ ಮೂಲಕ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರಲ್ಲಿನ ಪಾಠ-7ರ ಹೊಸ ಧರ್ಮಗಳ ಉದಯ ಈ ಪಾಠದಲ್ಲಿನ ಪುಟ ಸಂಖ್ಯೆ 82 ಹಾಗೂ 83ಕ್ಕೆ ಕತ್ತರಿ ಹಾಕಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ