Breaking News

ಮನುವಾದಿಗಳಿಗೆ ಸೆಡ್ಡು ಹೊಡೆದು ಬದುಕುತ್ತೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನ ಭೂಮಿಯಲ್ಲಿ ಅಭಿಮಾನಿಯ ಹೊಸ ಕಾರಿಗೆ ಶಾಸಕ ಚಾಲನೆ

Spread the love

ಬೆಳಗಾವಿ : ‘ ಮನುವಾದಿಗಳಿಗೆ ಹೆದರಿ ಜೀವನ ಮಾಡುವವರು ನಾವಲ್ಲ. ಅವರಿಗೆ ಸೆಡ್ಡು ಹೊಡೆದು ಬದುಕುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೂಢನಂಬಿಕೆಯ ವಿರುದ್ಧ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗ ನೂತನ ಕಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದರು.

‘ಸಂಕೇಶ್ವರದ ವಿಕ್ರಂ ಎಂಬುವವರು ಸಮಾಜದಲ್ಲಿ ಬದಲಾವಣೆ ಮಾಡಬೇಕು ಎಂಬ ಉದ್ದೇಶದಿಂದ ಹೆಜ್ಜೆ ಇಟ್ಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಈ ಹಿಂದೆಯೂ ಸಹ ಸ್ಮಶಾನದಲ್ಲಿ ಕಾರಿಗೆ ಚಾಲನೆ ನೀಡಲಾಗಿತ್ತು. ಇದರಿಂದ ಪ್ರೇರಣೆಗೊಂಡು ನೂತನ ಕಾರಿಗೆ ರುದ್ರಭೂಮಿಯಲ್ಲಿ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಹಂತ ಹಂತವಾಗಿ ಬದಲಾವಣೆ ಆಗುತ್ತಿದೆ ಎಂದು ತಿಳಿಸಿದರು.

ಕಾರಿನ ಮಾಲೀಕ ವಿಕ್ರಂ ಕರಣಿಂಗ್ ಮಾತನಾಡಿ, ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮೂಢನಂಬಿಕೆಯ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸುತ್ತಿದ್ದೇವೆ. ಅದೇ ರೀತಿ ಕಾರಿಗೆ ಚಾಲನೆ ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಪ್ರಯತ್ನ ಪಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ನವೀನ್ ಗಂಗರೆಡ್ಡಿ, ನಾಗರಾಜ ಕರಣಿಂಗ್, ರಾಜು ನಡಮನಿ, ಪ್ರಶಾಂತ್ ಬಾಡಕರ, ಶಿವರಾಜ ನೂಲಕರ್, ಸಂಜು ಹಲಗೆ, ಬಿ.ಎನ್ ಮುಗಳಿ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ