Breaking News

ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರಿಸಲು ವಿರೋಧ

Spread the love

ಗೋಕಾಕ: ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು 2ಎ ಗೆ ಸೇರ್ಪಡೆ ಮಾಡುವುದಕ್ಕೆ ರಾಜ್ಯ ಆರ್ಯ ಈಡಿಗ ಸಂಘದ ಯುವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ ಈಳಿಗೇರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈಡಿಗ, ಬಿಲ್ಲವ ಸೇರಿ ಅನೇಕ ಜಾತಿಗಳು ಈಗಾಗಲೇ 2ಎ ನಲ್ಲಿವೆ. ಇದರಲ್ಲಿ ಈಡಿಗ ಸಮುದಾಯ 60 ಲಕ್ಷದಿಂದ 70 ಲಕ್ಷ ಜನಸಂಖ್ಯೆ ಹೊಂದಿದೆ. 2ಎ ನಲ್ಲಿ ಈಗಾಗಲೇ ಇರುವ ಸಮುದಾಯಗಳಿಗೆ ಸರಿಯಾಗಿ ಮೀಸಲಾತಿ ಸೌಲಭ್ಯ ಸಿಗುತ್ತಿಲ್ಲ. ಈಗ ಆರ್ಥಿಕವಾಗಿ ಸಬಲರಾಗಿರುವ ಜಾತಿಗಳನ್ನು ಈ ವರ್ಗಕ್ಕೆ ಸೇರಿಸುವುದರಿಂದ ಎಲ್ಲರಿಗೂ ಸಮಸ್ಯೆಯಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

2ಎ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ ಶೇ 30ಕ್ಕೆ ಹೆಚ್ಚಳ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ