Breaking News

‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿ

Spread the love

ಬೆಂಗಳೂರು: ಮೊನ್ನೆಯಷ್ಟೆ ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿಯಾಗಿದೆ.

ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ. ತಕ್ಷಣವೇ ಈ ದೃಶ್ಯವನ್ನು ತೆಗೆದುಹಾಕುವಂತೆ ಆಗ್ರಹಿಸಿದ್ದಾರೆ.

ಪೊಗರು ಚಿತ್ರದ ನಿರ್ಮಾಪಕರು, ನಿರ್ದೇಶಕರು ಕ್ಷಮೆ ಕೋರಬೇಕು, ಇಲ್ಲದಿದ್ದರೆ ಮಂಗಳವಾರ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ, ತದನಂತರ ಇಡೀ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

Spread the loveಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ