Breaking News

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

Spread the love

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ