Breaking News

ಹೈಕಮಾಂಡ್ ಬುಲಾವ್: ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್

Spread the love

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ ದೆಹಲಿಗೆ ತೆರಳಿದ್ದಾರೆ.

ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಪದೇ ಪದೇ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಯತ್ನಾಳ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ತುರ್ತಾಗಿ ಬರುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಿಎಂ, ಸರ್ಕಾರ ಮತ್ತು ಪಕ್ಷದ ಬಗ್ಗೆ ಹೇಳಿಕೆ ನೀಡಿ ಮುಜುಗರ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಪಕ್ಷದಿಂದ ನೋಟಿಸ್ ನೀಡಿದ್ದು, ಅವರು ಉತ್ತರವನ್ನು ಕೂಡ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಮತ್ತೆ ಸಿಎಂ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ತುರ್ತಾಗಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ