Breaking News
Home / Uncategorized / ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: BSY

ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: BSY

Spread the love

ಬೆಂಗಳೂರು: ಕಾವೇರಿ ನದಿಯ ಹೆಚ್ಚುವರಿ ನೀರು ಬಳಸಲು ತಮಿಳುನಾಡಿಗೆ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕಾವೇರಿ-ಗುಂಡಾರ್ ನದಿ ಜೋಡಣೆಗೆ ಯೋಜನೆಗೆ ತಮಿಳುನಾಡು ಮುಂದಾಗಿದೆ. ಹೆಚ್ಚುವರಿ ನೀರು ಬಳಕೆಗೆ ಕರ್ನಾಟಕ ವಿರೋಧಿಸಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ , ಹೇಳಿಕೆ ಕೊಡುವುದರಿಂದ ಯಾವುದೇ ಉಪಯೋಗವಿಲ್ಲ. ಈ ಸಂಬಂಧ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಬಜೆಟ್ ಕುರಿತು ಮಾತನಾಡಿ, ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇವತ್ತು ಎಲ್ಲಾ ಇಲಾಖೆಗಳ ಸಭೆ ಮುಗಿಯುತ್ತದೆ. ನಾಳೆಯಿಂದ ಬಜೆಟ್ ಸಿದ್ಧತೆಗೆ ಏನೇನು ಮಾಡಬೇಕೋ ಅದನ್ನು ಮಾಡಲಿದ್ದೇವೆ. ಇತರೆ ಇಲಾಖೆಗಳ ಪ್ರಮುಖರ ಜೊತೆ ಚರ್ಚೆ ಮಾಡುತ್ತೇನೆಂದು ತಿಳಿಸಿದ್ದಾರೆ.

ಪಂಚಮಸಾಲಲಿ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿ, ಇಂದು ಪಂಚಮಸಾಲಿ ಸಮಾಜದ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಅವರೇ ಉತ್ತರ ನೀಡಲಿದ್ದಾರೆ ಎಂದರು.


Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ