Breaking News

ಸಿನಿಮಾ ಕ್ಷೇತ್ರದಲ್ಲಿ ರಾಜಕೀಯ ಆರಂಭವಾಗಿದೆ. ಇದೊಂದು ದೊಡ್ಡ ಹುನ್ನಾರ: ಜಗ್ಗೇಶ್​

Spread the love

ಬೆಂಗಳೂರು: ಜಾಹೀರಾತು ನೀಡುವ ಬಗ್ಗೆ ಮಾತನಾಡುವ ಭರದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ ದರ್ಶನ್​ ತೂಗುದೀಪ್​ ಅವರ ಬಗ್ಗೆ ಜಗ್ಗೇಶ್​ ಮಾತನಾಡಿರುವ ಆಡಿಯೋ ಎನ್ನಲಾದ ಆಡಿಯೋ ಕ್ಲಿಪ್​ ಒಂದು ಹರಿದಾಡಿದ್ದು, ಅದರಿಂದಲೇ ನವರಸ ನಾಯಕ ಜಗ್ಗೇಶ್​ ಪೇಚಿಗೆ ಸಿಲುಕುವಂತಾಗಿದೆ. ನೆಚ್ಚಿನ ನಾಯಕನ ಬಗ್ಗೆ ಕೆಟ್ಟದಾಗಿ ಮಾತನಾಡಿದ ಜಗ್ಗೇಶ್​ಗೆ ದರ್ಶನ್​ ಅಭಿಮಾನಿಗಳು ಸಿನಿಮಾ ಸೆಟ್​ನಲ್ಲೇ ಬೆವರಳಿಸಿದ್ದಾರೆ.

ಇತ್ತೀಚೆಗೆ ಜಗ್ಗೇಶ್​ ಅವರ ಧ್ವನಿ ಎನ್ನಲಾದ ಆಡಿಯೋ ಒಂದು ಹರಿದಾಡಿದೆ. ಅದರಲ್ಲಿ ಅವರು ದರ್ಶನ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ರೆಕಾರ್ಡ್​ ಆಗಿದೆ. ಸಿನಿಮಾದ ನಿರ್ಮಾಪಕರೊಬ್ಬರೊಂದಿಗೆ ಜಗ್ಗೇಶ್​ ಮಾತನಾಡಿದ್ದ ಆ ಆಡಿಯೋ ಕ್ಲಿಪ್​ ದರ್ಶನ್​ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಜಗ್ಗೇಶ್​ ಅವರು ತೋತಾಪುರಿ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಸಿನಿಮಾ ಸೆಟ್​ಗೆ ದಾಳಿಯಿಟ್ಟಿರುವ ದರ್ಶನ್​ ಅಭಿಮಾನಿಗಳು ಜಗ್ಗೇಶ್​ಗೆ ಮುತ್ತಿಗೆ ಹಾಕಿದ್ದಾರೆ. ಆದರೆ ಜಗ್ಗೇಶ್​ ಮಾತ್ರ ಆ ಆಡಿಯೋ ಕ್ಲಿಪ್​ನಲ್ಲಿರುವ ಧ್ವನಿ ತನ್ನದಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ. ತಾನು ದರ್ಶನ್​ ಹೆಸರಿನ ವೆಬ್​ ಡಿಸೈನರ್​ ಬಗ್ಗೆ ಮಾತನಾಡಿದ್ದು, ಅದನ್ನು ಎಡಿಟ್​ ಮಾಡಿ ಈ ರೀತಿ ಆರೋಪ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ರಾಜಕೀಯ ಆರಂಭವಾಗಿದೆ. ಇದೊಂದು ದೊಡ್ಡ ಹುನ್ನಾರ ಎಂದು ಅವರು ಹೇಳಿರುವುದು ಕಂಡುಬಂದಿದೆ


Spread the love

About Laxminews 24x7

Check Also

ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

Spread the loveಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ