Breaking News

ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್​ನಿಂದ ಬಿಗ್​ ರಿಲೀಫ್..!

Spread the love

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಿಂದ ಅರುಣಾರನ್ನು ಕೈಬಿಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್​ ಪುರಸ್ಕರಿಸಿದೆ. ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು.

ಇದನ್ನು ಪ್ರಶ್ನಿಸಿ ಅರುಣಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ರೆಡ್ಡಿ ಪತ್ನಿಯನ್ನ ಪ್ರಕರಣದಿಂದ‌ ಕೈಬಿಟ್ಟಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೋಮವಾರ (ಫೆ.22) ಅಂತಿಮ ಆದೇಶ ಹೊರಡಿಸಿದ ಹೈಕೋರ್ಟ್, ಸಿಬಿಐ ವಿಷೇಶ ನ್ಯಾಯಾಲಯದ ಆದೇಶವನ್ನು ಪುರಸ್ಕರಿಸಿದ್ದು, ರೆಡ್ಡಿ ಪತ್ನಿಯನ್ನು ಪ್ರಕರಣದಿಂದ ಕೈಬಿಟ್ಟಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ