Breaking News

ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ :ಕಾಂಗ್ರೆಸ್ ಆರೋಪ

Spread the love

ಬೆಂಗಳೂರು (ಫೆ. 23): ಶಿವಮೊಗ್ಗದ ಭದ್ರಾವತಿ ಬಳಿ ಜಿಲೆಟಿನ್ ಸ್ಫೋಟಗೊಂಡ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡು 6 ಜನರು ಸಾವನ್ನಪ್ಪಿದ್ದಾರೆ.

ಈ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ನಿನ್ನೆ ರಾತ್ರಿ 12.30ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಟೀಕಿಸಿರುವ ಕಾಂಗ್ರೆಸ್, ಈ ದುರಂತಕ್ಕೆ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಶಿವಮೊಗ್ಗದ ಜಿಲೆಟಿನ್ ಸ್ಫೋಟದ ಆಘಾತ ಮಾಸುವ ಮೊದಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇದು ಬಹಳ ಆಘಾತಕಾರಿಯಾದ ಸಂಗತಿ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

Spread the love *ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ