Breaking News

ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ

ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್​ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ತಿರುಗೇಟು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ರಾಮನ ಭಕ್ತೆ, ರಾಮಮಂದಿರಕ್ಕೆ 2 ಲಕ್ಷ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿ ಒಬ್ಬ ಮಹಿಳೆ ಬಗ್ಗೆ ಆಡುತ್ತಿರುವ ಮಾತುಗಳನ್ನು ಜನ ನೋಡುತ್ತಿದ್ದಾರೆ. ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್‌ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವ ವಿಚಾರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ