Breaking News

ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್

Spread the love

ಬೆಂಗಳೂರು

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ.

,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ

ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ  ಮಾಡಲು   psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ‌

 

ಪ್ರಕರಣದ ತನಿಖೆ ನಡೆಸದೇ ಫೆ. ೨೧ ಮತ್ತು ೨೨ ರಂದು ರಜೆ ಮೇಲೆ ತೆರಳಿದ್ದಲ್ಲದೇ, ಅರೋಪಿಗಳನ್ನು ದಸ್ತಗಿರಿ ಮಾಡದೇ ಇದ್ದಿದ್ದರಿಂದ ಈ ಸ್ಪೋಟ ಸಂಭವಿಸಿದೆ ಎಂದು‌ಆಪಾದ ನಾಪತ್ರದಲ್ಲಿ ಉಲ್ಲೇಖ‌ ಮಾಡಲಾಗಿದೆ‌

ಆರೋಪಿ ನಾಗರಾಜ ಸೂಚನೆ ಮೇರೆಗೆ ಅಕ್ಕಿ ಚೀಲದಲ್ಲಿ ಸ್ಪೋಟಕ ಸಾಗಿಸಲಾಗುತ್ತಿತ್ತು. ಆ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿ ೬ ಜನ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ಪತ್ತೆ ಮಾಡುವಂತೆ ಅಧೀನ ಸಿಬ್ಬಂದಿಗೂ ಸೂಚನೆ ನೀಡಿಲ್ಲ

ಆರೋಪಿಗಳನ್ನು ಸೂಕ್ತ ಸಂದರ್ಭದಲ್ಲಿ ದಸ್ತಗಿರಿ ಮಾಡಿದ್ದರೆ ಈ ಸ್ಫೋಟ ಪ್ರಕರಣ ಸಂಭವಿಸುತ್ತಿರಲಿಲ್ಲ ಎಂದು ತಿಳಿಸಲಾಗಿದೆ.

ಕರ್ತವ್ಯ ನಿರ್ವಹಣೆಯಲ್ಲಿ ನೀವು ಅತೀವ ನಿರ್ಲಕ್ಷ ಮತ್ತು ಬೇಜವಾಬ್ದಾರಿತನ ತೋರಿದ್ದೀರಿಈ ಎಲ್ಲ ಕಾರಣಗಳಿಂದಾಗಿ ಗೋಪಾಲರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ