Breaking News

ಕೊಲೆ ಪ್ರಕರಣ ಮೂವರು ಅರೆಸ್ಟ್………?

Spread the love

ಬೆಳಗಾವಿ,

ತಾಲೂಕಿನ ಸೋಮನಟ್ಟಿ ಗ್ರಾಮದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಸಿಕ್ಕಿದೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ಬೆಳಗಾವಿ ತಾಲೂಕಿನ ಸೋಮನಟ್ಟಿ ಗ್ರಾಮದ ಸಾಗರ ಗಂಗಪ್ಪ ಪೂಜೇರಿ ಎಂಬ ಯುವಕ ಫೆ.11ರಂದು ನಾಪತ್ತೆಯಾಗಿದ್ದ, ನಂತರ ಫೆ.22ರಂದು ಜೋಯಿಡಾ ತಾಲೂಕಿನ ಉಳವಿ ಬಳಿ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಕೊಲೆ ಕುರಿತು ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಮೂವರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಎಸಿಪಿ ಸದಾಶಿವ ಕಟ್ಟಿಮನಿ ನೇತೃತ್ವದ ತಂಡವು ಬಂಧಿಸಿದೆ.     ಬಂಧಿತ ಆರೋಪಿಗಳನ್ನು ಬೆಳಗಾವಿ ತಾಲೂಕಿನ ಕೋಳ್ಯಾನಟ್ಟಿ ಗ್ರಾಮದ ಬಾಳಪ್ಪ ಭಗವಂತಪ್ಪ ದಿನ್ನಿ, ಬಸವರಾಜ್ ಯಲ್ಲಪ್ಪ ಉಪ್ಪಾರ ಕೋಳ್ಯಾನಟಿ, ಬೈಲಹೊಂಗಲ ತಾಲೂಕಿನ ಸಂಪಗಾವಿ ಗ್ರಾಮದ ಮಂಜುನಾಥ್ ಪೀರಪ್ಪ ಬೀಡಿ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ