ಚೆನ್ನೈ : ಕೊರೊನಾ ಮಹಾಮಾರಿಯಿಂದಾಗಿ ಪ್ರಸಕ್ತ ಸಾಲಿನ 9, 10 ಹಾಗೂ ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ, ಉತ್ತೀರ್ಣಗೊಳಿಸಿ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.
ಅಲ್ಲಿನ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ಶೈಕ್ಷಣಿಕ ಕ್ಷೇತ್ರದ ಮೇಲೆ ಮಹಾಮಾರಿ ತನ್ನ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ, ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪಠ್ಯದಲ್ಲಿಯೂ ಕಡಿತಗೊಳಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ತಿಳಿಸಿತ್ತು. ವರ್ಷವಿಡೀ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಬೆಂಬಲಿತ ಶಿಕ್ಷಣ ಚಾನೆಲ್ ಮೂಲಕ ಪಾಠ ಮಾಡಲಾಗಿತ್ತು.
Laxmi News 24×7