Breaking News

ಬಸವಕಲ್ಯಾಣ ಉಪಚುನಾವಣೆ : ಬಿಜೆಪಿಯಿಂದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕೆ?

Spread the love

ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ.

ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ ಗೆ ರವಾನಿಸಲಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.


Spread the love

About Laxminews 24x7

Check Also

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Spread the loveಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ