Breaking News

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

Spread the love

ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.

ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು ಅವರು ಎಂದರು.

ಅವರು ಮುಖ್ಯಮಂತ್ರಿ ಆಗಿದ್ದಾಗ ಉದಾಸೀನದಿಂದ ಕಾಲ ಕಳೆದರು. ಈಗ ಕ್ಷೇತ್ರದ ಭೇಟಿ ಮಾಡಿ ಗೋಳಾಡುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿಗೆ ಹೋಗುವುದು ಅವರ ಗುಣ. ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆಯಾಗಲಿದ್ದಾರೆ. ಜೆಡಿಎಸ್ ನೆಲಕಚ್ಚಲಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ