Breaking News

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

Spread the love

ಬೆಂಗಳೂರು.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ.

ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ

ರಮೇಶ್ ಜಾರಕಿಹೊಳಿ‌ ವಹಿಸವರು.

ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ