Breaking News
Home / ರಾಜ್ಯ / ಜಾನುವಾರು ಹತ್ಯೆ: ಸದ್ಯಕ್ಕೆ ಕಠಿಣ ಕ್ರಮ ಇಲ್ಲ

ಜಾನುವಾರು ಹತ್ಯೆ: ಸದ್ಯಕ್ಕೆ ಕಠಿಣ ಕ್ರಮ ಇಲ್ಲ

Spread the love

ಬೆಂಗಳೂರು: ‘ಜಾನುವಾರು ಸಾಗಣೆ ಮಾಡುವವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ-2020 ಅನ್ನು ಸದ್ಯಕ್ಕೆ ಕಠಿಣವಾಗಿ ಅನ್ವಯ ಮಾಡುವುದಿಲ್ಲ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿರುವ ತನ್ನ ಭರವಸೆ ಮುಂದುವರಿಸಿದೆ.

ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಗಮನದಲ್ಲಿ ಇಟ್ಟುಕೊಂಡು ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸಮಯ ನೀಡಿತು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಕೋರಿದರು. ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಪೀಠ ಮುಂದೂಡಿತು.

‘ಈ ಹಿಂದಿನ ವಿಚಾರಣೆ ವೇಳೆ ಮಧ್ಯಂತರ ತಡೆ ಕೋರಿಕೆಯನ್ನು ಪರಿಗಣಿಸುವುದಾಗಿ ಪೀಠ ಹೇಳಿದಾಗ, ನಿಯಮಾವಳಿ ರೂಪಿಸುವ ತನಕ ಹೊಸ ಕಾಯ್ದೆಯ ಸೆಕ್ಷನ್ 5ರ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ’ ಎಂದು ಸರ್ಕಾರ ಭರವಸೆ ನೀಡಿತ್ತು.

‘ಕೃಷಿ ಉದ್ದೇಶಕ್ಕಾಗಿ ಒಂದೆಡೆಯಿಂದ ಮತ್ತೊಂದೆಡೆಗೆ ಜಾನುವಾರು ಸಾಗಿಸಿದರೂ ರೈತರ ವಿರುದ್ಧ ಪ್ರಕರಣ ದಾಖಲಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಜಾನುವಾರು ರಕ್ಷಣೆ ಹೆಸರಿನಲ್ಲಿ ಈ ಕಾಯ್ದೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳಲಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ