Breaking News

ಮಹಾರಾಷ್ಟ್ರದಲ್ಲಿ 10,12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕ ಪ್ರಕಟ

Spread the love

ಪುಣೆ,ಫೆಬ್ರವರಿ 27: ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.ಹಾಗಿದ್ದರೂ ಪ್ರೌಢಶಿಕ್ಷಣ ಮಂಡಳಿ 10 ಹಾಗೂ 12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದೆ.

ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

 

ನಾವು ಫೆಬ್ರವರಿ 16 ರಂದು ಪರೀಕ್ಷೆಯ ಪ್ರಸ್ತಾವಿತ ದಿನಾಂಕಗಳನ್ನು ಘೋಷಿಸಿದ್ದೆವು ಮತ್ತು ತಜ್ಞರಿಂದ ಸಲಹೆಗಳನ್ನು ಆಹ್ವಾನಿಸಿದ್ದೆವು, ಸೂಕ್ತ ಸಮಾಲೋಚನೆಯ ನಂತರ, ನಾವು ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದೇವೆ” ಎಂದು ಘೋಷಿಸಿದ್ದಾಗಿ ಭೋಸಲೆ ಹೇಳಿದ್ದಾರೆ..

ಎಸ್‌ಎಸ್‌ಸಿ ಪರೀಕ್ಷೆಗಳು ಏ. 29ರಿಂದ ಮೇ 20ರ ವರೆಗೆ, ಎಚ್‌ಎಸ್‌ಸಿ ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಕಾರ್ಯದರ್ಶಿ ಅಶೋಕ್‌ ಭೋಸ್ಲೆ ತಿಳಿಸಿದ್ದಾರೆ.

ಈ ಪರೀಕ್ಷೆಗಳನ್ನು ಪ್ರತಿ ವರ್ಷ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ನಡೆಸಲಾಗುತ್ತಿತ್ತು. ಕೋವಿಡ್‌-19 ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷೆಯ ದಿನಾಂಕಗಳನ್ನು ಬದಲಿಸಲಾಗಿದೆ ಎಂದೂ ಹೇಳಿದ್ದಾರೆ.

ಈಗಾಗಲೇ ಕೇರಳ,ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ ಮತ್ತೆ ಲಾಕ್‌ಡೌನ್ ಮಾಡುವ ಎಚ್ಚರಿಕೆಯನ್ನೂ ನೀಡಲಾಗುತ್ತಿದೆ.

ದೇಶದಲ್ಲಿ ಎರಡನೇ ಹಂತದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಇದಾದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ