Breaking News

ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು

Spread the love

ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 ಮನೆ ಮತ್ತು 1 ದೇವಸ್ಥಾನ, ಮಾಳಮಾರುತಿ ಠಾಣಾ ವ್ಯಾಪ್ತಿಯ 5 ಮನೆ, ಗೋಕಾಕ್ ಶಹರದಲ್ಲಿ 1 ಮನೆ ಯಮಕನ ಮರಡಿಯಲ್ಲಿ 1 ಮನೆ ಸೇರಿದಂತೆ ಹಲವೆಡೆಗಳಲ್ಲಿ ಕಳ್ಳತನ ಮಾಡಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್ ಪಿ ಅಮರನಾಥ ರೆಡ್ಡಿ, ಡಿಎಸ್ ಪಿ ಜಾವಿದ್ ಇನಾಂದಾರ್ ಹುಕ್ಕೇರಿ ಸಿಪಿಐ ಅಮೇಶ್ ಛಾಯಗೋಳ ಮಾರ್ಗದರ್ಶನದಲ್ಲಿ ಯಮಕನಮರಡಿ ಪಿಎಸ್ ಐ ರಮೇಶ ಪಾಟೀಲ ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಟಿ.ವಿ.ನೆರ್ಲಿ, ವಿಠಲ ನಾಯಕ, ಎಲ್.ವೈ.ಕಿಲಾರ, ಮಹೇಶ ಮಸರಗುಪ್ಪಿ, ಆರ್.ಆರ್.ಗಿಡ್ಡಪ್ಪಗೋಳ, ಎಸ್.ಎ.ಶೇಟ್, ಮೈಲಾರಿ ಬೆಣ್ಣೆ ಇವರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ