Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

Spread the love

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು.
ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ತಿಳಿಸಿದ ಅವರು, ಮಹಿಳೆಯರು ವೈಜ್ಞಾನಿಕ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಲು ಸರ್ಕಾರ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಅದರ ಸದುಪಯೋಗ ಪಡಿಸಿಕೊಂಡು ಇತರರಲ್ಲೂ ಜಾಗೃತಿಯನ್ನು ಮೂಡಿಸಿದಾಗ ಮಾತ್ರ ವಿಜ್ಞಾನ ದಿನಾಚರಣೆ ಆಚರಿಸುವುದಕ್ಕೂ ಸಾರ್ಥಕವಾಗುತ್ತದೆ. ಪ್ರಥಮವಾಗಿ ನೊಬೆಲ್ ಪ್ರಶಸ್ತಿ ಪಡೆದ ದೇಶದ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರಂತೆ ಸಂಶೋಧಕರಾಗಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಉದ್ಘಾಟಿಸಿದರು. ವೇದಿಕೆ ಮೇಲೆ ಪ್ರಾಚಾರ್ಯ ಐ.ಎಸ್.ಪವಾರ, ಉಪನ್ಯಾಸಕ ಎಂ.ಬಿ ಹೂಗಾರ, ವಿದ್ಯಾರ್ಥಿ ಪ್ರತಿನಿಧಿ ಪ್ರೀತಿ ಹೆಬ್ಬಾಳ, ಅಂಬಿಕಾ ಚಿಕ್ಕೋಡಿ, ಶ್ರೀದೇವಿ ಮಮದಾಪೂರ,ನೀಲಕಂಠ ಅಂಗಡಿ ಇದ್ದರು.
ಎಸ್.ಎಚ್.ತಿಪ್ಪನ್ನವರ ಸ್ವಾಗತಿಸಿದರು, ಸಚೀನ ನಿರೂಪಿಸಿದರು. ಪ್ರವೀಣ ವಂದಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ