Breaking News

ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!

Spread the love

ಬೆಂಗಳೂರು : ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಇ ಮೇಲ್ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

ದುಷ್ಕರ್ಮಿಗಳು ಶಂಕರ್ ಬಿದರಿ ಅವರ ಇ ಮೇಲ್ ಐಡಿಯನ್ನು ಹ್ಯಾಕ್ ಮಾಡಿ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಇದನ್ನು ನಂಬಿದ ಬಿದರಿ ಅವರ ಸ್ನೇಹಿತರೊಬ್ಬರು 25 ಸಾವಿರ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಿದ ಬಳಿಕ ಶಂಕರ್ ಬಿದರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಈ ವೇಳೆ ಇ- ಮೇಲ್ ಐಡಿ ಹ್ಯಾಕ್ ಆಗಿರುವುದು ಶಂಕರ್ ಬಿದರಿ ಅವರ ಗಮನಕ್ಕೆ ಬಂದಿದೆ.

ಘಟನೆ ಸಂಬಂಧ ಶಂಕರ್ ಬಿದರಿ ಅವರು, ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಇ ಮೇಲ್ ಹ್ಯಾಕ್ ಮಾಡಿದವರನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ