Breaking News

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

Spread the love

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ.
ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಗೋಕಾಕದ ಶಂಕರ ಹಾದಿಮನಿ, ಗೋಕಾಕದ ಬೇಸ್ಟ್ ಫೋಜರ್ ಯಾಕೂಬ ಬೇಪಾರಿ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚಾಳ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸದಸ್ಯರಾದ ಅಬ್ಬಾಸ ದೇಸಾಯಿ, ಡಿವೈಎಸ್‍ಪಿ ಜಾವೇದ ಇನಾಮದಾರ, ಸಿಪಿಐ ಶ್ರೀಶೈಲ ಬ್ಯಾಕೂಡ, ಪೌರಾಯುಕ್ತ ಶಿವಾನಂದ ಹಿರೇಮಠ, ಪರಿಸರ ಅಭಿಯಂತ ಎಂ.ಎಚ್.ಗಜಾಕೋಶ, ಮುಖಂಡರಾದ ಜ್ಯೋತಿಭಾ ಸುಭಂಜಿ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ವಿಷ್ಣು ಲಾತೂರ, ಸಂಜು ಚಿಪ್ಪಲಕಟ್ಟಿ ಮನೋಜ ಅಂಕದವರ, ಲಕ್ಕಪ್ಪ ಬಂಡಿ, ಅಸೋಶಿಯನ್ ಪದಾಧಿಕಾರಿಗಳಾದ ಸಂಜಯ ದೇವರಮನಿ, ಕಾಟೇಶ ಗೋಕಾವಿ, ರಮೇಶ ಕಳ್ಳಿಮನಿ, ಮಹೇಶ ಸಾತಪುತೆ, ಸುರೇಶ ಜೋರಾಪೂರ, ರಿಯಾಜ ಚೌಗಲಾ, ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನ ವಿತರಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ