ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ಬೆಳವಡಿ ಮಲ್ಲಮ್ಮ ಉತ್ಸವವನ್ನು ಭಾನುವಾರ ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು.
ಸೋಂದಾದಿಂದ ಆಗಮಿಸಿದ ವೀರಜ್ಯೋತಿಯನ್ನು ಶಾಸಕ ಮಹಾಂತೇಶ ಕೌಜಲಗಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬರಮಾಡಿಕೊಂಡು ಪೂಜೆ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳವಡಿ ಮಲ್ಲಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
Laxmi News 24×7