Breaking News

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

Spread the love

ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ.

ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ತೋರಿಸಿ ಸಂಸ್ಥೆಯ ಬಸ್ ಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ 2021ರ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು 2020-21ನೇ ಸಾಲಿನ ಬಸ್ ಪಾಸ್‍ಗಳನ್ನು ಸೇವಾ ಸಿಂಧುವಿನ ಮೂಲಕ ಅರ್ಜಿ ಪಡೆದು ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಕೂಡಲೇ ಬಸ್ ಪಾಸ್‍ಗಳನ್ನು ಪಡೆದುಕೊಳ್ಳಬೇಕು. ಆದರೆ, ಈಗ ವಿದ್ಯಾರ್ಥಿಗಳಿಗೆ ಬಸ್ ಪಾಸುಗಳನ್ನು ಪಡೆಯಲು ಸಾಕಷ್ಟು ಕಾಲಾವಕಾಶ ನೀಡಲು ಸಲುವಾಗಿ 2021ರ ಮಾರ್ಚ್ 31ರವರೆಗೆ ಸಂಸ್ಥೆಯ ಬಸ್‍ಗಳನ್ನು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ