Breaking News

ಬೆಂಗಳೂರಲ್ಲಿಂದು ಅಂಗನವಾಡಿ, ಸಾರಿಗೆ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಅಬ್ಬರ

Spread the love

ಬೆಂಗಳೂರು,ಮಾ.2- ದಿನೇ ದಿನೇ ಹೆಚ್ಚಾಗುತ್ತಿರುವ ದಿನಸಿ ಪದಾರ್ಥಗಳ ದರ, ತೈಲ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದರೆ ಸಾರಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದವರು ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ 9 ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ನೌಕರರು ಒತ್ತಾಯಿಸಿ ಸರ್ಕಾರಕ್ಕೆ ಮಾ.15ರ ಗಡುವು ನೀಡಿದರೆ, ಅಂಗನವಾಡಿ ಕಾರ್ಯಕರ್ತೆಯರು ವೇತನ ಹೆಚ್ಚಳ , ಪಿಂಚಣಿ ಹಾಗೂ ಇಎಸ್‍ಐ ಸೌಲಭ್ಯಕ್ಕೆ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿತ್ತು. ಮೆಜೆಸ್ಟಿಕ್, ಆನಂದರಾವ್ ವೃತ್ತ, ಹಡ್ಸನ್ ಸರ್ಕಲ್, ಕೆ.ಆರ್.ವೃತ್ತ, ಶೇಷಾದ್ರಿ ರಸ್ತೆ ಸೇರಿದಂತೆ ಹಲವೆಡೆ ಕೆಲ ಕಾಲ ಟ್ರಾಫಿಕ್‍ಜಾಮ್ ಉಂಟಾಗಿತ್ತು.

# ಕಾಂಗ್ರೆಸ್ ನಾರಿಯರ ಆಕ್ರೋಶ ಜಾಥಾ:
ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ನೇತೃತ್ವದಲ್ಲಿ ಮೆಜೆಸ್ಟಿಕ್‍ನ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ರ್ಯಾಲಿ ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮತ್ತಿತರ ಕಾಂಗ್ರೆಸ್ ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮವನ್ನು ಖಂಡಿಸಿ
ದರು.

ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರಿಗೆ ಶಾಪವಾಗಿದೆ. ಸರ್ಕಾರಗಳಿಗೆ ತಕ್ಕ ಬುದ್ದಿ ಕಲಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ದರ ಇಳಿಸದೆ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಯುಪಿಎ ಅವಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದ ಬಿಜೆಪಿಯವರು ಎಲ್ಲಿ ಹೋದರು ಎಂದು ಪ್ರಶ್ನಿಸಿದರು.

ಕೋವಿಡ್ ಸಂಕಷ್ಟದಿಂದ ಜನ ಹೈರಾಣಾಗಿದ್ದಾರೆ. ಈಗ ಬೆಲೆ ಏರಿಕೆಯಿಂದ ಮತ್ತಷ್ಟು ಸಂಕಷ್ಟ ಬಂದೊದಗಿದೆ. ಬೆಲೆ ಇಳಿಕೆಯಾಗದಿದ್ದರೆ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ