ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ ಪತನದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಇಬ್ರಾಹಿಂ ಅಂತರ ಕಾಯ್ದುಕೊಂಡಿದ್ದರು. ಇದೀಗ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದು, ಮಹತ್ವ ಪಡೆದುಕೊಂಡಿದೆ.
Laxmi News 24×7