ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ.
ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾ. 4ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮೊದಲ 2 ದಿನ ಒಂದು ದೇಶ ಒಂದು ಚುನಾವಣೆ ಕುರಿತು ಚರ್ಚೆ ನಡೆಯಲಿದೆ. ಮಾ. 8ರಂದು ಬಜೆಟ್ ಮಂಡನೆಯಾಗಲಿದ್ದು, ಅನಂತರ ಮಾ. ೩೧ರ ವರೆಗೆ ಬಜೆಟ್ ಮೇಲಿನ ಚರ್ಚೆ, ಸರಕಾರದ ಉತ್ತರ, ಪ್ರಶ್ನೋತ್ತರ ಕಲಾಪಗಳು ಇರಲಿವೆ ಎಂದಿದ್ದಾರೆ.
ಕೊರೊನಾ ಸಂಪೂರ್ಣ ನಿವಾರಣೆಯಾಗಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡೇ ಅಧಿವೇಶನ ನಡೆಸಬೇಕಾಗಿದೆ. ಆರೋಗ್ಯ ಸಮಸ್ಯೆ ಇರುವ ಶಾಸಕರು ಅಧಿವೇಶನಕ್ಕೆ ಬರುವುದು ಬೇಡ. ಅಧಿಕಾರಿ- ಸಿಬ್ಬಂದಿ ಈ ಬಗ್ಗೆ ಎಚ್ಚರ ವಹಿಸಬೇಕು. ಅಧಿವೇಶನಕ್ಕೆ ಬಂದಾಗ ಆರೋಗ್ಯ ಸಮಸ್ಯೆ ಎದುರಾದರೆ ತಪಾಸಣೆ ಮತ್ತು ತುರ್ತು ಚಿಕಿತ್ಸೆಗೆ ವ್ಯವಸ್ಥೆ ಇರಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Laxmi News 24×7