Breaking News

ಒಂದೇ ಓವರ್ ನಲ್ಲಿ 6,6,6,6,6.6: ಯುವಿ ದಾಖಲೆ ಸರಿಗಟ್ಟಿದ ಪೊಲಾರ್ಡ್

Spread the love

ಯಂಟಿಗುವಾ : ವೆಸ್ಟ್ ಇಂಡೀಸ್ ನ ನಾಯಕ ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಶ್ರೀಲಂಕಾದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾದ ಅಕಿಲಾ ಧನಂಜಯ ಅವರ ಒವರ್ ನಲ್ಲಿ 6ಸಿಕ್ಸರ್ ಸಿಡಿಸುವ ಮೂಲಕ ಪೊಲಾರ್ಡ್ ಈ ಸಾಧನೆ ಮಾಡಿದ್ದಾರೆ.

2007ರಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ವಿಶ್ವಕಪ್ ನ ಉದ್ಘಾಟನಾ ಆವೃತ್ತಿಯಲ್ಲಿ ಯುವರಾಜ್ ಸಿಂಗ್ ಒಂದು ಓವರ್ ನಲ್ಲಿ 6 ಸಿಕ್ಸರ್ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಲಂಕಾ ಒಂಬತ್ತು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಬಳಿಕ ಗುರಿ ಬೆನ್ನಟ್ಟಿದ ವಿಂಡೀಸ್, ಪೊಲಾರ್ಡ್ ಅಬ್ಬರದ ನೆರವಿನೊಂದಿಗೆ 13.1 ಓವರ್‌ಗಳಲ್ಲೇ ಆರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತ್ತು.


Spread the love

About Laxminews 24x7

Check Also

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

Spread the love    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ