Breaking News

ಮೀಸಲಾತಿ: ಬಿಕ್ಕಟ್ಟು ಇತ್ಯರ್ಥಕ್ಕೆ ಸಮಿತಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ

Spread the love

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ಬುಧವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ.

ತಮ್ಮನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಕುರುಬ ಸಮುದಾಯ ಪಟ್ಟು ಹಿಡಿದಿತ್ತು. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡಲು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರದ (ಮಾರ್ಚ್‌ 4) ಗಡುವು ನೀಡಿದ್ದರು.

ಎಸ್‌.ಟಿ ಸಮುದಾಯಗಳಿಗೆ ನೀಡಿರುವ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸುವಂತೆ ವಾಲ್ಮೀಕಿ ಸಮುದಾಯವೂ ಹೋರಾಟ ನಡೆಸುತ್ತಿದೆ. ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಹಲವು ಉಪ ಪಂಗಡಗಳು ತಮ್ಮನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಬೇಡಿಕೆ ಇಟ್ಟಿವೆ. ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗುತ್ತಿದೆ.

ಮೀಸಲಾತಿಗಾಗಿ ಹಲವು ಸಮುದಾಯಗಳು ಏಕಕಾಲಕ್ಕೆ ಹೋರಾಟಕ್ಕೆ ಇಳಿದಿರುವುದರಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪಂಚಮಸಾಲಿ ಸಮುದಾಯದ ಹೋರಾಟ ದಿನ ಕಳೆದಂತೆ ರಾಜಕೀಯವಾಗಿಯೂ ಸರ್ಕಾರಕ್ಕೆ ಇರಿಸು-ಮುರಿಸು ಉಂಟು ಮಾಡುತ್ತಿದೆ. ಮೀಸಲಾತಿಗಾಗಿ ಹೋರಾಟಕ್ಕೆ ಇಳಿದಿರುವ ಎಲ್ಲ ಸಮುದಾಯಗಳನ್ನೂ ಸಮಾಧಾನಪಡಿಸಲು ಸರ್ಕಾರ ಮುಂದಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ