Breaking News

1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತಿರ್ಣರನ್ನಾಗಿಸುವ ಚಿಂತನೆಯತ್ತ ಶಿಕ್ಷಣ ಇಲಾಖೆ!

Spread the love

ಬೆಂಗಳೂರು : ದೇಶದಲ್ಲಿ ಮತ್ತೆ ಹೇಳುತ್ತಿರುವ ಕೋರೋನ ಎರಡನೇ ಅಲೆ ಭೀತಿ ಕರ್ನಾಟಕ ರಾಜ್ಯಕ್ಕೂ ತಟ್ಟಿದ್ದು, 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ಕ್ಲಾಸ್ ಪ್ರಾರಂಭಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಈ ಚಿಕ್ಕ ಮಕ್ಕಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ .

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು , ರಾಜ್ಯದಲ್ಲಿಯೂ ಸೋಂಕು ಹೆಚ್ಚುವ ಆತಂಕ ಸೃಷ್ಟಿಯಾಗಿದ್ದರ ಹಿನ್ನೆಲೆಯಲ್ಲಿ ಬೆಂಗಳೂರು , ಕೇರಳ ಗಡಿಭಾಗ ಹಾಗೂ ಮಹಾರಾಷ್ಟ್ರ ಗಡಿಭಾಗದ ಶಾಲೆಗಳಲ್ಲಿ ಕೇವಲ 9 ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಆದರೆ ಇನ್ನುಳಿದ ಭಾಗದಲ್ಲಿ ಈಗಾಗಲೇ 8 ರಿಂದ 12 ನೇ ತರಗತಿವರೆಗೆ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದು, ಬೆಂಗಳೂರು , ಬಳ್ಳಾರಿ , ಮೈಸೂರು , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಂಕಿತ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ .

ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು , ಕಂಟೈಂಟ್ ಝನ್ ಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವುದನ್ನು ರಾಜ್ಯ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅಷ್ಟೇ ಅಲ್ಲದೆ, ಕೋವಿಡ್ ತಾಂತ್ರಿಕ ಸಮಿತಿ ಕೂಡ ಪ್ರಾಥಮಿಕ ಶಾಲೆಯನ್ನು ಸದ್ಯಕ್ಕೆ ಆರಂಭಿಸುವುದು ಬೇಡ ಎಂದು ಸಲಹೆ ನೀಡಿದೆ . ಕೇರಳ , ಮಹಾರಾಷ್ಟ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರಕ್ಕೆ ಬಂದಿದ್ದು , ರಾಜ್ಯದಲ್ಲಿಯೂ 1 ರಿಂದ 5 ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ .

ಇನ್ನು ಹದಿನೈದು ದಿನಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಗಮನಿಸಿ, ಆನಂತರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸುತ್ತವೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ