Breaking News

ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಚರ್ಚೆ

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ವಿಡಿಯೋ ಬಹಿರಂಗವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಇಂದು ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ. ಸಿಡಿ ಬಹಿರಂಗ ಹಿನ್ನೆಲೆಯಲ್ಲಿ ಇವರ ಭೇಟಿ ಮಹತ್ವ ಪಡೆದುಕೊಂಡಿದೆ. ವಿಧಾನಸಭೆ ಕಲಾಪ ಮುಂದೂಡಿದ ನಂತರ ಉಭಯ ನಾಯಕರು ಮುಖಾಮುಖಿಯಾಗಿದ್ದು, ಚರ್ಚೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ