Breaking News
Home / ಜಿಲ್ಲೆ / ಬೀದರ್:ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್

ಬೀದರ್:ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್

Spread the love

ಬೀದರ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದೀಗ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಓಡಾಡುತ್ತಿದ್ದವರ ಸುಮಾರು 213 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್‍ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕಲಂ 144 ಸಿಆರ್‌ಪಿಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ.

ಕೊರೊನಾ ವೈರಸ್ ಹರಡದಂತೆ ತಡೆಯಲು ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು. ಅವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸುಮ್ಮನೇ ಅನಾವಶ್ಯಕವಾಗಿ ಹೊರಗೆ ಬಂದು ಓಡಾಡಬಾರದು ಎಂದು ಪೊಲೀಸರು ಆದೇಶ ನೀಡಿದ್ದರು. ಹೀಗಾಗಿ ಅನಾವಶ್ಯಕವಾಗಿ ಓಡಾಡಿದವರ 213 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಜರುಗಿಸಲಾಗಿದೆ.

ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ಎಲ್.ನಾಗೇಶ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ