Breaking News

ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆರೋಪ: ಮಸ್ತಾನ್ ಚಂದ್ರ ಸೇರಿದಂತೆ ನೈಜೀರಿಯಾ ಮೂಲದ ಪ್ರಜೆ ಬಂಧನ

Spread the love

ಬೆಂಗಳೂರು: ಸೆಲೆಬ್ರಿಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ಮಸ್ತಾನ್ ಚಂದ್ರ ನೈಜೀರಿಯಾ ಮೂಲದ ವ್ಯಕ್ತಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗೋವಿಂದಪುರ ಬಳಿಯ ಆತನ ನಿವಾಸದಿಂದ ಮಸ್ತಾನ್ ಚಂದ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದು, ಕೆಲ ಕನ್ನಡ ಸಿನೆಮಾಗಳಲ್ಲಿ ಕೂಡ ನಟಿಸಿದ್ದ ಎಂದು ತಿಳಿದುಬಂದಿದೆ. ಈ ಮೂಲಕ ಅಕ್ರಮವಾಗಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಕಳ್ಳಸಾಗಣೆ, ಸೇವನೆ ವಿರುದ್ಧ ನಗರ ಅಪರಾಧ ವಿಭಾಗ ಪೊಲೀಸರ ಬೇಟೆ ಮುಂದುವರಿದಿದೆ.

ಇನ್ನೊಂದೆಡೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಹೆಣ್ಣೂರು ಬಳಿ ಬಂಧಿಸಿ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ 500 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಹೆಚ್ಚಿನ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ನಗರ ಅಪರಾಧ ವಿಭಾಗ ಪೊಲೀಸರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ