Breaking News

ಬಹಳ ದಿನಗಳ ನಂತರ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ!

Spread the love

ಬೆಂಗಳೂರು: ಬಹಳ ದಿನಗಳ ನಂತರ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದರು.

ಕಾಂಗ್ರೆಸ್ ನಲ್ಲಿರುವ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿ ಕುತೂಹಲ ಮೂಡಿಸಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ ಇಬ್ರಾಹಿಂ, ಇಂದು ಶುಭ ಶುಕ್ರವಾರ, ಎಲ್ಲವೂ ಒಳ್ಳೆಯದಾಗುತ್ತದೆ ಎಂದರು.

ಜೆಡಿಎಸ್ ಗೆ ಸೇರುವ ವಿಚಾರವಾಗಿ ಮಾತನಾಡಿದ ಅವರು, ಅದು ಇಲ್ಲಿ ತೀರ್ಮಾನ ಆಗುವುದಿಲ್ಲ. ದೆಹಲಿಯಲ್ಲಿ ತೀರ್ಮಾನ ಆಗುತ್ತದೆ. ಸಮಯ ಸಿಕ್ಕಾಗ ದೆಹಲಿಗೆ ಹೋಗಿ ಬರುತ್ತೇನೆ ಎಂದರು.

ಮೊನ್ನೆ ಇಬ್ರಾಹಿಂ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಮಾಡಿ ಊಟ ಮಾಡಿದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಎಲ್ಲ ದೇವರ ದಯೆ, ಋಣ ಸಂದಾಯ..” ಎಂದಷ್ಟೇ ಹೇಳಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ