Breaking News
Home / ರಾಜ್ಯ / ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ

ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ

Spread the love

ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು ತಿಂಗಳ ಹಿಂದೆಯೇ ಮಾಡಬೇಕಿತ್ತು. ತಡವಾಗಿಯಾದರೂ ಸಮಿತಿ ರಚಿಸಿದ್ದು ಸಂತಸದ ತಂದಿದೆ’ ಎಂದು ತೋಂಟದ ಶ್ರೀಗಳು ತಿಳಿಸಿದರು.

‘ಮೀಸಲಾತಿಗೆ ಸಂಬಂಧಿಸಿದಂತೆ ಸರಿಯಾದ ದಿಕ್ಕಿನಲ್ಲಿ ಅಧ್ಯಯನ ನಡೆಯಬೇಕು. ಮೀಸಲಾತಿಯನ್ನು ಉಳ್ಳವರೇ ಪಡೆಯುವಂತಾಗಬಾರದು. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಈ ವಿಚಾರದಲ್ಲಿ ಸಚಿವರು, ಶಾಸಕರು, ರಾಜಕಾರಣಿಗಳು ಪಕ್ಷಭೇದ ಮರೆತು ಹೋರಾಟ ಮಾಡಬೇಕು’ ಎಂದು ಹೇಳಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀಗಳು, ‘ಬೇವಿನ ಬೀಜವ ಬಿತ್ತಿ ಮಾವಿನ ಫಲ ಬೇಕೆಂದರೆ ಹೇಗೆ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ