Breaking News

ಡ್ರಗ್ಸ್​ ಪ್ರಕರಣ: ಬಿಗ್​ಬಾಸ್​​ ಸ್ಪರ್ಧಿ ಮಸ್ತಾನ್​ ಮನೆ ಮೇಲೆ ದಾಳಿ, ವಶಕ್ಕೆ

Spread the love

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ಡ್ರಗ್ಸ್ ಪಾರ್ಟಿ‌ ಆಯೋಜಿಸಿ‌ ಉದ್ಯಮಿಗಳಿಬ್ಬರು ಸಿಕ್ಕಿಬಿದ್ದ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ‌ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ‌ ಮಸ್ತಾನ್ ಚಂದ್ರ ಮನೆ ಮೇಲೆ‌ ಪೊಲೀಸರು ಶುಕ್ರವಾರ ದಾಳಿ ಮಾಡಿದ್ದಾರೆ.

ಬಾಣಸವಾಡಿ ಉಪವಿಭಾಗದ ಎಸಿಪಿ ನಿಂಗಪ್ಪ ಸಕ್ರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಸಂಜಯನಗರದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಸ್ತಾನ್​ ಅವರನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆದೊಯ್ದಿದ್ದಾರೆ.

ಇತ್ತೀಚೆಗಷ್ಟೇ ಪ್ರಕರಣದಲ್ಲಿ ನೈಜೀರಿಯಾ ಪ್ರಜೆಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. ಆತ ನೀಡಿದ ಹೇಳಿಕೆ ಆಧರಿಸಿ‌ ನ್ಯಾಯಾಲಯದ ವಾರೆಂಟ್ ಪಡೆದು ಮಸ್ತಾನ್ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದರು.

ಇನ್ನೊಬ್ಬ ಆರೋಪಿ ಎನ್ನಲಾದ ಕೇಶವ್ ಕೌಲ್ ಎಂಬಾತನ ಮನೆ ಮೇಲೂ ದಾಳಿ ನಡೆದಿರುವ ಮಾಹಿತಿ ಇದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ