Breaking News

ಕೇಂದ್ರದ ವಿರುದ್ದ ಹೆಚ್ಚಾದ ಆಕ್ರೋಶ: 100ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

Spread the love

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಇಂದು ( ಮಾ.6) ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ.

ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಇಂದು ಸಂಜೆ 4 ಗಂಟೆಯವರೆಗೂ ಬಂದ್ ಮುಂದುವರೆಯಲಿದೆ.

ಹರ್ಯಾಣ, ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು 2020ರ ನವೆಂಬರ್ ನಿಂದ ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್ ಗಡಿಗಳಲ್ಲಿ ಕೆಂದ್ರದ ಮೂರು ಕೃಷಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಇಂದು 100ನೇ ದಿನಕ್ಕೆ ಕಾಲಿಟ್ಟಿದೆ.

 

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ಮುಂದುವರೆಸಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ನಿಲ್ಲಿಸಲಾಗುವುದಿಲ್ಲ. ಮೋದಿ ಸರ್ಕಾರ ರೈತರ ನೋವನ್ನು ಅರ್ಥೈಸಿಕೊಳ್ಳುತ್ತಿಲ್ಲ. ಈ ಪ್ರತಿಭಟನೆಯನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿದೆ ಎಂದು ಪಂಜಾಬ್ ನ ರೈತ ರಾಜಾ ಸಿಂಗ್ ಹರಿಹಾಯ್ದಿದ್ದಾರೆ.

ಏತನ್ಮಧ್ಯೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರತಿಭಟನೆ ಆರಂಭ ಕಾಲದಿಂದಲೂ ರೈತರನ್ನು ಬೆಂಬಲಿಸುತ್ತಾ ಬರುತ್ತಿದ್ದು, ಮಾರ್ಚ್ 5ರಂದು ಕೂಡ “ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ಶೋಷಣೆ ನಡೆಸುತ್ತಿದೆ” ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಹಾಸನ ಜನರ ಹೃದಯ ಹಿಂಡುತ್ತಿರುವ ಹೃದಯಾಘಾತ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ

Spread the loveಹಾಸನ, ಜೂನ್​ 30: ಹಾಸನ (Hassan) ಜಿಲ್ಲೆಯಲ್ಲಿ ಹೃದಯಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ