ಮುಂಬೈನಲ್ಲಿ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೋ ವಾಹನದ ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ.
ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಅಂಟಿಲಿಯಾ ನಿವಾಸದ ಬಳಿ 24 ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ್ದು, ಅನುಮಾನಾಸ್ಪದ ವಾಹನದಲ್ಲಿ ಸ್ಪೋಟಕಗಳನ್ನು ತುಂಬಿಟ್ಟಿದ್ದು ಭಯೋತ್ಪಾದಕರ ಕೃತ್ಯ ಇರಬಹುದೆಂದು ಹೇಳಲಾಗಿತ್ತು.
ಮುಂಬೈ ಅಪರಾಧ ವಿಭಾಗದ ಪೊಲೀಸರು ಮತ್ತು ಎಟಿಎಸ್ ತನಿಖೆ ಕೈಗೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಕಾರ್ಪಿಯೋ ಕಾರು ನಿಲ್ಲಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ.
ವಾಹನದ ಮಾಲೀಕ ಮನ್ ಸುಖ್ ಹಿರೇನ್ ಗುರುವಾರದಿಂದ ನಾಪತ್ತೆಯಾಗಿದ್ದು, ಶುಕ್ರವಾರ ನೌಪಾಡಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಂತರದಲ್ಲಿ ಆತನ ಮೃತದೇಹ ಪತ್ತೆಯಾಗಿದ್ದು, ಮುಂಬ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಲಯ 1 ರ ಡಿಸಿಪಿ ಅವಿನಾಶ್ ಅಂಬೋರೆ ತಿಳಿಸಿದ್ದಾರೆ.
Laxmi News 24×7