Breaking News

ಕುಡಿದ ಮತ್ತಿನಲ್ಲಿ ನಡೆದೇ ಹೋಯ್ತು ಕೊಲೆ

Spread the love

ವಿಜಯಪುರ: ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ ಪತ್ನಿ ನಡುವೆ ಕ್ಷುಲ್ಲಕ ವಿಚಾರಕ್ಕೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಾದ ಪತಿ, ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಯತ್ತ ಕೊಡಲಿಯನ್ನು ಬೀಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಮುದ್ದೇಬಿಹಾಳ ಪೊಲೀಸರು, ಆರೋಪಿ ಕಲ್ಲಪ್ಪನನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Spread the loveವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ