Breaking News
Home / ಜಿಲ್ಲೆ / ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್​​​ 8ರಂದು ಎಂ.ಇ.ಎಸ್​ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್​​​ 8ರಂದು ಎಂ.ಇ.ಎಸ್​ ಪ್ರತಿಭಟನೆ ಹಮ್ಮಿಕೊಂಡಿದೆ.

Spread the love

ಬೆಳಗಾವಿ: ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜಸ್ತಂಭ ತೆರವಿಗೆ ಆಗ್ರಹಿಸಿ ಮಾರ್ಚ್​​​ 8ರಂದು ಎಂ.ಇ.ಎಸ್​ ಪ್ರತಿಭಟನೆ ಹಮ್ಮಿಕೊಂಡಿದೆ. ಎಂ.ಇ.ಎಸ್ ಪ್ರತಿಭಟನೆಯಲ್ಲಿ ಸಂಘದ ಮುಖಂಡರು ಪ್ರಚೋದನಕಾರಿ ಭಾಷಣ ಮತ್ತು ಹೇಳಿಕೆಗಳನ್ನು ನೀಡುವ ಸಾಧ್ಯತೆ ಸಹ ಇದೆ. ಇವುಗಳಿಂದ ಶಾಂತಿ ‌ಭಂಗವಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ 2 ದಿನಗಳ ಕಾಲ ಮಹಾರಾಷ್ಟ್ರ ನಾಯಕರ ಪ್ರವೇಶವನ್ನು ನಿಷೇಧಿಸಲಾಗಿದೆ. ನಾಳೆ ಬೆಳಗ್ಗೆ 6ರಿಂದ ಮಾ.9ರವರೆಗೂ ಗಡಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪ್ರವೇಶ ನಿಷೇಧಿಸಲಾಗಿದೆ. ಪ್ರವೇಶ ನಿಷೇಧಿಸಿ ಡಿ.ಸಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿ ಇನ್ನಿತರ ಮುಖಂಡರ ಗಡಿಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಬಿದ್ದಿದೆ.
ಒಂದು ವೇಳೆ, ಧ್ವಜಸ್ತಂಭ ತೆರವು ಮಾಡದಿದ್ರೆ ಭಗವಾ ಧ್ವಜ ಅಳವಡಿಕೆಗೆ ಅವಕಾಶ ನೀಡುವಂತೆ MES ನಾಯಕರು ಪಟ್ಟುಹಿಡಿದಿದ್ದಾರೆ. ಹೀಗಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 2 ದಿನಗಳ ಕಾಲ ಮಹಾರಾಷ್ಟ್ರ ನಾಯಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಕೊಳ್ಳೇಗಾಲದಲ್ಲಿ ರೈತರ ಪ್ರತಿಭಟನೆ
ಇತ್ತ, ದೆಹಲಿಯಲ್ಲಿ ರೈತರ ಪ್ರತಿಭಟನೆ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಆರ್.ಎಂ.ಸಿ ಆವರಣದಲ್ಲಿ ಕಪ್ಪುಪಟ್ಟಿ ಧರಿಸಿ ಕೃಷಿಕರು ಪ್ರತಿಭಟನೆ ನಡೆಸಿದರು. ರೈತ ಸಂಘದ ಕಾರ್ಯಕರ್ತರಿಂದ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ರೈತ ವಿರೋಧಿ ಕಾಯ್ದೆ ಕೈಬಿಡುವಂತೆ ರೈತರಿಂದ ಆಗ್ರಹ ಕೇಳಿಬಂತು.

ಚನ್ನಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಅತ್ತ, ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ವಡ್ನಾಳ್ ರಾಜಣ್ಣ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಚನ್ನಗಿರಿ ಪಟ್ಟಣ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಜೊತೆಗೆ, ತಹಶಿಲ್ದಾರರಿಗೆ ಮನವಿ ಸಹ ಸಲ್ಲಿಸಿದರು.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ