Breaking News

ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ

Spread the love

ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, ರಾಜ್ಯದೆಲ್ಲೆಡೆ ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 10 ಕೋಟಿ ರೂ. ವಿತರಣೆ ಮಾಡಲಾಗಿದೆ. ಮಹಿಳೆಯರು ಸಮಾಜದಲ್ಲಿ ಸಬಲರಾಗಬೇಕು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು ಎಂಬ ಕನಸನ್ನು ನನಸಾಗಿಸುವ ಉದ್ದೇಶದಿಂದ ಅವರಿಗೆ ಚೆಕ್ ವಿತರಿಸುವ ಮೂಲಕ ಆರ್ಥಿಕ ಬಲ ತುಂಬಿದರು.

ಖಾಸಗಿ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಹೆಚ್ಚಿನ ಬಡ್ಡಿ ತೆರುವುದನ್ನು ತಪ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ಜನಪರ ಯೋಜನೆಯನ್ನು ಸರ್ವ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ವರವಟ್ಟಿ, ಸಿಡಿಪಿಓ ಸುಮಿತ್ರಾ ಡಿ.ಬಿ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ, ಉಪಾಧ್ಯಕ್ಷರದಾ ನೀತಾ ಬಾಗಡಿ, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸಸಿ ನೆಟ್ಟ ಮಕ್ಕಳು

Spread the love ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ