Breaking News

ಅಶ್ಲೀಲ ಸಿಡಿ ಪ್ರಕರಣ: ಕೊಟ್ಟ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ!

Spread the love

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಹೊಸ ತಿರುವು ಮೂಡಿದೆ. ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪೊಲೀಸರಿಗೆ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಹೌದು, ತಮ್ಮ ವಕೀಲರ ಸಲಹೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದೂರು ಹಿಂಪಡೆಯುತ್ತಿರುವುದಾಗಿ ವಕೀಲ ಕುಮಾರ್ ಪಾಟೀಲ್ ಅವರಿಗೆ ಪತ್ರ ರವಾನಿಸಿದ್ದಾರೆ. ಕಬ್ಬನ್ ಪಾರ್ಕ್​ ಪೊಲೀಸ್​ ಠಾಣೆಗೆ ತೆರಳಿ ದಿನೇಶ್ ಪರ ವಕೀಲರು ದೂರು ವಾಪಸ್ ಪಡೆಯುವುದಾಗಿ ಪೊಲೀಸರಿಗೆ ತಿಳಿಸಿದ್ಧಾರೆ. ‘ದೂರಿನಲ್ಲಿ ತಾಂತ್ರಿಕ ದೋಷ ಇದ್ದಿದ್ದರಿಂದ ವಾಪಸ್ ಪಡೆದಿದ್ದೇವೆ. ಈ ಬಗ್ಗೆ ದಿನೇಶ್ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ಕೊಡಲಿದ್ದಾರೆ’ ಎಂದು ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ಆದರೆ, ಪೊಲೀಸ್ ಮೂಲಗಳು ಹೇಳುವ ಪ್ರಕಾರ, ಠಾಣಾ ಮಟ್ಟದಲ್ಲಿ ನೀಡಿದ ದೂರನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಈಗಾಗಲೇ ಸಂತ್ರಸ್ತ ಯುವತಿಯನ್ನು ಪತ್ತೆ ಮಾಡಲಾಗಿದ್ದು, ಎಫ್​ಐಆರ್​ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ. ಈ ಹಂತದಲ್ಲಿ ದೂರು ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

 

‘ನೌಕರಿ ಕೊಡಿಸುವುದಾಗಿ ಯುವತಿಗೆ ವಂಚಿಸಿ, ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಆಕೆಗೆ ಮತ್ತು ಆಕೆಯ ಕುಟುಂಬದವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಗೆ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.

ಇದರ ಬೆನ್ನಲ್ಲೇ ದಿನೇಶ್ ಕಲ್ಲಹಳ್ಳಿ ಅಶ್ಲೀಲ ವಿಡಿಯೋವನ್ನೂ ಬಿಡುಗಡೆ ಮಾಡಿದ್ದರು. ಇದರಿಂದ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಇದೀಗ ಉಲ್ಟಾ ಹೊಡೆದಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.


Spread the love

About Laxminews 24x7

Check Also

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ

Spread the love ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ‌ ಮಧ್ಯೆ ಬೇಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ