Breaking News

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

Spread the love

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.

 

 

ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ.

ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು ಘೋಷಣೆ ಕೂಗುತ್ತ ಪಾಲಿಕೆಯತ್ತ ಧಾವಿಸುತ್ತಿರುವಾಗ ಪೋಲೀಸರು ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಇತ್ತ ಕಾಲೇಜು ರಸ್ತೆಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಕಾರ್ಯಕರ್ತರು ಕನ್ನಡ ಧ್ವಜ ತೆರವು ಮಾಡಿ ಇಲ್ಲವಾದಲ್ಲಿ ಪಾಲಿಕೆ ಎದುರು ಭಗವಾ ಧ್ವಜ ಹಾರಿಸಿ ಎಂದು ಪ್ರತಿಭಟನೆ ನಡೆಸಿ,ಜಿಲ್ಲಾಧಿಕಾರಗಳಿಗೆ ಮನವಿ ಅರ್ಪಿಸಿದ್ದಾರೆ.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ