Breaking News

ಬಜೆಟ್ ಪ್ರಮುಖಾಂಶಗಳು:ಮಹದಾಯಿ ಯೋಜನೆಗೆ 1677 ಕೋಟಿ

Spread the love

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು… ಸಾಲುಗಳನ್ನು ಸ್ಮರಿಸುತ್ತಾ ಆಯವ್ಯಯ ಮಂಡನೆ ಮಾಡಿದರು.

ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಆರ್ಥಿಕ ವರ್ಷ ಮೊದಲ ಮೂರು ತಿಂಗಳು ರಾಜಸ್ವ ಸಂಗ್ರಹ ಇಳಿಕೆಯಾಗಿದೆ. ಆದರೆ ಈಗ ರಾಜ್ಯದಲ್ಲಿ ಅಹಾರ ಉತ್ಪಾದನೆಯಲ್ಲಿ ನೂತನ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ ಎಂದರು.

ಕೊರೊನಾ ಕಾರಣದಿಂದಾಗಿ ಸಾಕಷ್ಟು ನಷ್ಟ ಉಂಟಾಗಿದ್ದು, ಕೈಗಾರಿಕಾ ವಲಯ ಶೇ.51 ಹಾಗೂ ಸೇವಾ ವಲಯ ಶೇ.3.1 ಇಳಿಕೆ. ಕೃಷಿ ಕ್ಷೇತ್ರದಲ್ಲಿ ಶೇ.6.4ರಷ್ಟು ಬೆಳವಣಿಗೆ ಕಂಡಿದೆ. ಜಿಡಿಪಿಗೆ ಶೇ.8ರಷ್ಟು ಕರ್ನಾಟಕದ ಕೊಡುಗೆ ಇದೆ ಎಂದು ಹೇಳಿದರು.

ಬಜೆಟ್ ಗಾತ್ರ 2 ಲಕ್ಷದ 43ಸಾವಿರದ 734 ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡಿಸಲಾಗುತ್ತಿದೆ. ಬಜೆಟ್ ನಲ್ಲಿ ಮಠಗಳಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ, ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ 5 ಕೋಟಿ ನೀಡಲಾಗಿದೆ.

ಬಜೆಟ್ ಪ್ರಮುಖಾಂಶಗಳು:
ಅಂತರಾಷ್ಟ್ರೀಯ ಮಹಿಳಾದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬಜೆಟ್ ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ.
* ಮಹಿಳೆಯರಿಗೆ 2 ಕೋಟಿ ರೂಪಾಯಿವರೆಗೆ ಸಾಲ ಸೌಲಭ್ಯ
* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್
* ಬೆಂಗಳೂರಿನಲ್ಲಿ ನಿರ್ಭಯಾ ಯೋಜನೆಯಡಿ 7500, ಮಹಿಳೆಯರಿಗೆ ಗೋದಾಮು, ಅಂಗಡಿ ನಿರ್ಮಾಣಕ್ಕೆ ಸಹಾಯ ಸೇರಿ ವಿವಿಧ ಯೋಜನೆ ಘೋಷಣೆ
* ಫ್ಲ್ಯಾಟ್ ಗಳ ಮುದ್ರಾಂಕ ಶುಲ್ಕ ಶೇ.5ರಿಂದ ಶೇ.3ಕ್ಕೆ ಇಳಿಕೆ
* ಪೆಟ್ರೋಲ್-ಡೀಸೆಲ್ ದರ ಯಥಾಸ್ಥಿತಿ
* ಗೋಹತ್ಯೆ ತಡೆಯಲು ಜಿಲ್ಲೆಗೊಂದು ಗೋಶಾಲೆ ನಿರ್ಮಾಣ
* ರಾಜ್ಯದಲ್ಲಿ ಹೊಸದಾಗಿ 52 ಬಸ್ ಸ್ಟ್ಯಾಂಡ್ ಸ್ಥಾಪಸುವುದಾಗಿ ಘೋಷಣೆ
* ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ಅನುದಾದ
* ಎಸ್.ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಬಜೆಟ್ ನಲ್ಲಿ ಕೋಟಿ ಮೀಸಲು
* ಬೆಂಗಳೂರು ಹೆಸರಘಟ್ಟದಲ್ಲಿ 100 ಎಕರೆ ಥೀಮ್ ಪಾರ್ಕ್ ನಿರ್ಮಾಣ
* ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನಲ್ಲಿ 2 ಕೋಟಿ ವೆಚ್ಚದಲ್ಲಿ ಆಯುರ್ವೇದ ಔಷದಿ ಅಳವಡಿಕೆ ಕೇಂದ್ರ ಸ್ಥಾಪನೆ
* ನಂದಿ ಗುರ್ಗ್ ಮೇಕೆ ತಳಿಗಳ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ

* ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಅನುದಾನ.
* ಮಹದಾಯಿ ಯೋಜನೆಗೆ 1677 ಕೋಟಿ ರೂಪಾಯಿ ಅನುದಾನ ನೀಡಿಕೆ
* ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು ಮೊತ್ತಕ್ಕೆ 21,474 ಕೋಟಿ ರೂ ಆಡಳಿತಾತ್ಮಕ ಅನುಮೋದನೆ
* ಕೃಷ್ಣಾ ಭಾಗ್ಯ ಜಲನಿಗಮ 5600 ಕೋಟಿ ರೂ ಅನುದಾನ
* ಬೆಂಗಳೂರು ಸಮಗ್ರ ಅಭಿವೃದ್ಧಿಗೆ 7795 ಕೋಟಿ ರೂ ಅನುದಾನ
* ಬೆಂಗಳೂರು ವಿಷನ್ 2022 ಅಡಿಯಲ್ಲಿ ಬೆಂಗಳೂರಿಗೆ ನವ ಚೈತನ್ಯ ಕಾರ್ಯಕ್ರಮ ಜಾರಿಗೊಳಿಸಿ, ಬೆಂಗಳೂರಿನ ಮಲ್ಲೇಶ್ವರಂನ ಮೈಸೂರು ಲ್ಯಾಂಪ್ಸ್ ಪ್ರದೇಶದಲ್ಲಿ ಎಕ್ಸ್
* ಪೀರಿಯನ್ಸ್ ಬೆಂಗಳೂರು ಕೇಂದ್ರ ಸ್ಥಾಪನೆ
* ಬೆಂಗಳೂರು ಉಪನಗರ ರೈಲು ಯೋಜನೆಗೆ 850 ಕೋಟಿ ರೂ ಮೀಸಲು
* ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ 50 ಹಾಸ್ಟೆಲ್ ಸ್ಥಾಪನೆ ಮಾಡಲು 50 ಕೋಟಿ ರೂ ಅನುದಾನ
* ರಾಜ್ಯದಲ್ಲಿ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭ
* 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ
* ರಾಜ್ಯದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ

* ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ
* ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ