Breaking News

ಹೊಸ ತೆರಿಗೆ ಇಲ್ಲ, ಪೆಟ್ರೋಲ್ ತೆರಿಗೆ ಕಡಿತವೂ ಇಲ್ಲ

Spread the love

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಬಜೆಟ್‌ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಅವರು, ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ ಕಡಿಮೆ ಇದೆ. ಇದನ್ನು ಹೊರತುಪಡಿಸಿ 2021-22ನೇ ಸಾಲಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸಲಾಗಿಲ್ಲ. ಹೀಗಾಗಿ ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯು ಜನರ ಮೇಲೆ ಇನ್ನಷ್ಟು ಹೊರೆಯಾಗಬಾರದು ಎಂದು ತೆರಿಗೆ ಹೆಚ್ಚಿಸದಿರಲು ನಿರ್ಧರಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ