Breaking News

ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸಲು ಮತ್ತು ಬಜೆಟ್ ಮಂಡಿಸಲು ಬಿ ಎಸ್ ಯಡಿಯೂರಪ್ಪಗೆ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ

ಬಜೆಟ್ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

 

26 ಎಕರೆ ಬಡಾವಣೆ ಯೋಜನೆಯಲ್ಲಿ ಡಿನೋಟಿಫೈ ಗೆ ಸಂಬಂಧಿಸಿದ ಅವ್ಯವಹಾರ ಕೇಳಿಬಂದಿತ್ತು. ಈ ವಿಚಾರದಲ್ಲಿ ಬಿಎಸ್ ವೈ ಮತ್ತು ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಸೂಚಿಸಿತು. ಅದನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋದರು ಅಲ್ಲಿಯೂ ಅವರಿಗೆ ರಿಲೀಫ್ ಸಿಕ್ಕಿಲ್ಲ. ಸಿಎಂ ಯಡಿಯೂರಪ್ಪ ಸದ್ಯ ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಹಾಗಾಗಿ ಅವರಿಗೆ ಬಜೆಟ್ ಮಂಡಿಸಲು ನೈತಿಕತೆಯಿಲ್ಲ ಎಂದು ಆರೋಪಿಸಿದರು.

ಸಿಡಿ ಪ್ರಕರಣದ ಬಳಿಕ ರಾಜ್ಯದ ಆರು ಸಚಿವರು ಕೋರ್ಟ್ ನಲ್ಲಿ ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ. ಯಾಕೆ ಭಯದಿಂದ ಓಡಿ ಹೋಗಬೇಕು. ಹೀಗೆ ಹೋಗಿದ್ದಾರೆ ಅಂದರೆ ಅದರ ಹಿಂದೆ ಏನೋ ಇರಬೇಕು. ಅದಕ್ಕೆ ಭಯಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕಾಂಗ್ರೆಸ್ ಸಭಾತ್ಯಾಗ: ರಾಜ್ಯ ಬಜೆಟ್ ಕಲಾಪವನ್ನು ಕಾಂಗ್ರೆಸ್ ವಿರೋಧಿಸಿದ್ದು, ಬಜೆಟ್ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.

 

Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ