ತುಮಕೂರು: ದಿವಂಗತ ಮಾಜಿ IAS ಅಧಿಕಾರಿ ಡಿ.ಕೆ. ರವಿಯವರ ತಂದೆ ಕರಿಯಪ್ಪ(70) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಕರಿಯಪ್ಪನವ್ರು ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಸ್ವಗ್ರಹದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವ್ರನ್ನ ಹುಲಿಯೂರು ದುರ್ಗದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಸೇರಿಸಲಾಯ್ತು. ನಂತ್ರ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ʼನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ರಾತ್ರಿ 8 ಗಂಟೆ ಸುಮಾರಿಗೆ ಮರಣಿಸಿದ್ದಾರೆ ಎನ್ನಲಾಗ್ತಿದೆ.
Laxmi News 24×7