Breaking News

ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದವನಿಗೆ 10 ವರ್ಷ ಜೈಲು; ಒಬ್ಬನ ಮೇಲೆಯೇ 21 ಪೋಕ್ಸೋ ಪ್ರಕರಣಗಳು

Spread the love

ಉಡುಪಿ: ಈತನ ಮೇಲಿದ್ದಿದ್ದು ಒಂದೆರಡು ಪ್ರಕರಣಗಳಲ್ಲ. ಬರೋಬ್ಬರಿ 21 ಪೋಕ್ಸೋ ಪ್ರಕರಣಗಳು. ಅಷ್ಟಕ್ಕೂ ಈತನ ಮೇಲೆ ಹೀಗೆ ಇಷ್ಟೊಂದು ಕೇಸುಗಳು ಬೀಳಲು ಕಾರಣ ಈತ ಬಾಲಕರಿಗೆ ನೀಡಿದ್ದ ಲೈಂಗಿಕ ಕಿರುಕುಳ. ಹೌದು.. ಬಾಲಕರಿಗೆ ಲೈಂಗಿಕವಾಗಿ ಕಿರುಕುಳು ನೀಡಿದ್ದ ಈ ವ್ಯಕ್ತಿಗೆ ನ್ಯಾಯಾಲಯ ಈಗ 10 ವರ್ಷ ಜೈಲುಶಿಕ್ಷೆ ವಿಧಿಸಿದೆ.

ಈ ಆರೋಪಿಯ ಹೆಸರು ಚಂದ್ರ ಹೆಮ್ಮಾಡಿ. ಈತನ ಮೇಲೆ 21 ಪ್ರಕರಣಗಳಿದ್ದು, ಆ ಪೈಕಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್ ಅವರು ಈತನಿಗೆ 10 ವರ್ಷ ಜೈಲುಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವೈಟಿ ರಾಘವೇಂದ್ರ ವಾದ ಮಂಡಿಸಿದ್ದಾರೆ.

ಲೈಂಗಿಕ ವಿಕೃತಿ ಹೊಂದಿದ್ದ ಚಂದ್ರ ಹೆಮ್ಮಾಡಿ ವಿರುದ್ಧ ದಾಖಲಾಗಿದ್ದ 21 ಪ್ರಕರಣಗಳ ಪೈಕಿ ಮೊದಲನೆಯ ಪ್ರಕರಣ ಸಂಬಂಧ ತೀರ್ಪು ಹೊರಬಿದ್ದಿದ್ದು, ಇನ್ನೂ 20 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. 2018ರ ನವೆಂಬರ್​ನಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಈತ ದಿನಪತ್ರಿಕೆಯೊಂದಿಗೆ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ