ನವದೆಹಲಿ: ದೇಶದಲ್ಲಿ ಕಳೆದ ತಿಂಗಳು ವಿಮಾನಯಾನ ಕೈಗೊಳ್ಳುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ ಎಂದು ಡಿಜಿಸಿಎ ವರದಿ ಆಧರಿಸಿ ಐಸಿಆರ್‌ಎ ಹೇಳಿದೆ.
ಪ್ರಯಾಣ ನಿರ್ಬಂಧ ಮತ್ತು ವಿಮಾನ ಪ್ರಯಾಣದಲ್ಲಿ ಇರುವ ಕೆಲವೊಂದು ನಿಯಮಗಳಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಫೆಬ್ರುವರಿ ತಿಂಗಳಿನಲ್ಲಿ ಒಟ್ಟಾರೆ ಶೇ 37 ಕುಸಿತ ಕಂಡುಬಂದಿದೆ ಎಂದು ವರದಿಯಾಗಿದೆ.
ಫೆಬ್ರುವರಿ ತಿಂಗಳಿನಲ್ಲಿ ದೇಶೀಯ ವಿಮಾನದಲ್ಲಿ ಒಟ್ಟು 78 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಆದರೆ ಜನವರಿ 2021ಕ್ಕೆ ಹೋಲಿಸಿದರೆ ಸ್ವಲ್ಪ ಪ್ರಮಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಡಿಜಿಸಿಎ ವರದಿ ಪ್ರಕಾರ, ಜನವರಿಯಲ್ಲಿ 77.34 ಲಕ್ಷ ಮಂದಿ ಪ್ರಯಾಣಿಸಿದ್ದರು. ಅಲ್ಲದೆ, 2020ರ ಫೆಬ್ರುವರಿಯಲ್ಲಿನ ಪ್ರಯಾಣಿಕರ ಸಂಖ್ಯೆ ಗಮನಿಸಿದರೆ, 1.23 ದೇಶೀಯ ಪ್ರಯಾಣಿಕರು ಇದ್ದರು. ಆದರೆ ಈ ವರ್ಷ ಅದು 78 ಲಕ್ಷಕ್ಕೆ ಕುಸಿದಿದೆ.
ದೇಶೀಯ ವಿಮಾನಯಾನ ನಡೆಸುವ ವಿಮಾನಗಳ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಪ್ರಗತಿ ಕಂಡುಬಂದಿಲ್ಲ ಎಂದು ಐಸಿಆರ್‌ಎ ಉಪಾಧ್ಯಕ್ಷ ಕಿಂಜಲ್ ಶಾ ತಿಳಿಸಿದ್ದಾರೆ.
Laxmi News 24×7